Eye and Health Checkup camp PPHS

SHARE THIS!

ಚಿಕ್ಕಬಳ್ಳಾಪುರ ನಗರದ ಪಂಚಗಿರಿ ಭೋದನ ಪ್ರೌಢಶಾಲೆಯಲ್ಲಿ ಶ್ರೀ ಕೆ.ವಿ.ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಹಮ್ಮಿಕೊಂಡಿದ್ದ ನೇತ್ರ ಹಾಗೂ ಆರೋಗ್ಯ ತಪಾಸಣ ಶಿಬಿರದಲ್ಲಿ ನಗರ ಸೇರಿದಂತೆ ಗ್ರಾಮಾಂತರ ಭಾಗದ ನೂರಾರು ಮಂದಿ ಶಿಬಿರದ ಪ್ರಯೋಜನೆ ಪಡೆದರು.
ಶಿಬಿರಕ್ಕೆ ಚಾಲನೆ ನೀಡಿದ ಸಂಸ್ಥೆಯ ಅಧ್ಯಕ್ಷ ಕೆ.ವಿ.ನವೀನ್ ಕಿರಣ್ ಮಾತನಾಡಿ, ನೇತ್ರದಾನದಿಂದ ಅಂಧರಿಬ್ಬರ ಬಾಳಿಗೆ ಬೆಳಕು ನೀಡಬಹುದಾಗಿದ್ದು, ಸತ್ತ ನಂತರವೂ ತಾವೂ ಮಾಡಿದ ಕಣ್ಣುಗಳ ದಾನದ ಮೂಲಕ ಬದುಕಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.
ಪ್ರತಿಯೊಬ್ಬ ಮನುಷ್ಯನು ತನ್ನ ಆರೋಗ್ಯದ ಬಗ್ಗೆ ಅತ್ಯಂತ ಕಾಳಜಿವಹಿಸಬೇಕು ಎಂದು ಸಲಹೆ ನೀಡಿದ ನವೀನ್‍ಕಿರಣ್, ದಿನನಿತ್ಯದ ಚಟುವಟಿಕೆಯಲ್ಲಿ ಯೋಗ ಕ್ರೀಡೆಗಳಲ್ಲಿ ಬಾಗವಹಿಸುವುದನ್ನು ರೂಢಿಸಿಕೊಂಡು, ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಂತರಾಗಿ ಎಂದರು.

 

 

 

Follow us on Social Media