ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಣ ಸಂಸ್ಥೆಗಳು ಹೆಚ್ಚಾಗಿ ಬೆಳೆಯಬೇಕು – ಕೆ.ವಿ. ನವೀನ್ ಕಿರಣ್

SHARE THIS!

 

 

ಚಿಕ್ಕಬಳ್ಳಾಪುರ/ ಕೊಳವನಹಳ್ಳಿ : ಗ್ರಾಮೀಣ ಪ್ರದೇಶಗಳಲ್ಲಿನ ಮಕ್ಕಳಿಗೂ ಸಹ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯ ಬೇಕು.  ಕಲ್ಪವೃಕ್ಷ ಶಿಕ್ಷಣ ಸಂಸ್ಥೆಯಂಥ ಅನೇಕ ಸಂಸ್ಥೆಗಳು ಇಂದು ಗ್ರಾಮೀಣ ಪ್ರದೇಶಗಳಲ್ಲಿ ಬೆಳೆಯ ಬೇಕು ಎಂದು ಸಮಾಜ ಸೇವಕ ಕೆ.ವಿ. ನವೀನ್ ಕಿರಣ್ ಅವರು ಹೇಳಿದರು.

ಕೊಳವನಹಳ್ಳಿಯ ಕಲ್ಪವೃಕ್ಷ ಗ್ರಾಮಾಂತರ ಪ್ರೌಢಶಾಲೆಯ 23 ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,

ಗ್ರಾಮೀಣ ಪ್ರದೇಶಗಳಲ್ಲಿ  ಕಟ್ಟಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು.

ಕಲ್ಪವೃಕ್ಷ ಶಿಕ್ಷಣ ಸಂಸ್ಥೆ ಆ ಕೆಲಸವನ್ನು 23 ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ನಿಜಕ್ಕೂ ಇದು ಶ್ಲಾಘನೀಯ ಎಂದು ಹೇಳಿದರು.

ಪ್ರತಿ ಹಳ್ಳಿಯಲ್ಲೂ ಇಂತಹ ಶಿಕ್ಷಣ ಸಂಸ್ಥೆಗಳು ಬೆಳೆಯಬೇಕು ಆಗಲೇ ಗ್ರಾಮೀಣ ಭಾಗದ ಪ್ರತಿಯೊಂದು ಮಗುವಿಗೂ ಒಳ್ಳೆಯ ಶಿಕ್ಷಣ ದೊರೆಯುತ್ತದೆ ಎಂದರು. ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಜವಾಬ್ದಾರಿ ಕೂಡ ಮಹತ್ವದ್ದು. ಪ್ರತಿದಿನ ಪಾಲಕರು ಮಕ್ಕಳ ವಿದ್ಯಾಭ್ಯಾಸದ ಕಡೆಗೂ ಗಮನ ನೀಡಬೇಕು ಎಂದು ಪೋಷಕರಿಗೆ ಕಿವಿ ಮಾತು ಹೇಳಿದರು. 

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಟಿ. ನಾರಾಯಣ ಸ್ವಾಮಿ, ಪ್ರಾಧ್ಯಾಪಕರು ಭಾಗಿಯಾಗಿದ್ದರು.

 

 

Follow us on Social Media